Kannada NewsKarnataka NewsLatestPolitics

*ನನಗೂ ಪಾರ್ಲಿಮೆಂಟ್ ಗೆ ಹೋಗುವ ಆಸೆ ಇದೆ; ಮನದ ಮಾತು ಹೇಳಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಧಿಕಾರ ಹಂಚಿಕೆ ಹಾಗೂ ಲೋಕಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ.

Home add -Advt

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಧಿಕಾರ ಹಂಚಿಕೆ ನನಗೆ , ಸಿಎಂಗೆ ಹಾಗೂ ವರಿಷ್ಠರಿಗೆ ಸಂಬಂಧಪಟ್ಟ ವಿಚಾರ ಎಂದು ಹೇಳಿದ್ದಾರೆ.

ಇದೇ ವೇಳೆ 2028ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಅಧಿಕರಕ್ಕೆ ಬರುವುದು ನಿಶ್ಚಿತ ಎಂದು ವಿಸ್ವಾಸ ವ್ಯಕ್ತಪಡಿಸಿದರು. ಲೋಕಸಭಾ ಚುನಾವಣೆ ಸಂಬಂಧ ಈಗಾಗಲೇ ಸಭೆಗಳನ್ನು ಮಾಡುತ್ತಿದ್ದೇವೆ. ಕೆಲ ಸಚಿವರಿಗೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಎಂಬ ಆಸೆ ಇದೆ. ನನಗೂ ಕೂಡ ಪಾರ್ಲಿಮೆಂಟ್ ಗೆ ಹೋಗಬೇಕು ಎಂಬ ಆಸೆ ಇದೆ ಎಂದು ಹೇಳಿದರು.

ಕಾಂಗ್ರೆಸ್ ಜನರಿಗಾಗಿ, ಜನರ ಬದುಕಿನ ಬಗ್ಗೆ ಯೋಚಿಸುತ್ತದೆ. ಆ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಹಿಂದೆ ನಮ್ಮ ಗ್ಯಾರಂಟಿ ಯೋಜನೆಯನ್ನು ಟೀಸಿದ್ದ ಬಿಜೆಪಿ ಈಗ ನಮ್ಮ ಯೋಜನೆ ಕಾಪಿ ಮಾಡುತ್ತಿದ್ದಾರೆ ಎಂದರು.


Related Articles

Back to top button