Karnataka News

*ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಕಿಮ್ಸ್ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಿಂಗರಾಜು (19) ಮೃತ ಯುವಕ. ಭಾನುವಾರ ರಾತ್ರಿ ಹಳೇ ಹುಬ್ಬಳ್ಳಿಯ ಸಾಯಿನಗರ ಈಶ್ವರ ದೇವಸ್ಥಾನ ಬಳಿ ಸಿಲಿಂಡರ್ ಸ್ಫೋಟಗೊಂಡಿತ್ತು. ಘಟನೆಯಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ನಾಲ್ವರ ಸ್ಥಿತಿ ಗಂಭೀರವಾಗಿತ್ತು. ಇದೀಗ ನಾಲ್ವರು ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

Home add -Advt

ಕಿಮ್ಸ್ ನಲ್ಲಿ ನಿನ್ನೆ ಇಬ್ಬರು ಗಾಯಾಳುಗಳು ಮೃತಪಟ್ಟಿದ್ದರು. ಇಂದು ಬೆಳಿಗ್ಗೆ ಓರ್ವ ಬಾಲಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದ. ಇದರ ಬೆನ್ನಲ್ಲೇ ಇದೀಗ 19 ವರ್ಷದ ಲಿಂಗರಾಜು ಕೂಡ ಕೊನೆಯುಸಿರೆಳೆದಿದ್ದಾರೆ.

ಐವರು ಗಾಯಾಳುಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Related Articles

Back to top button