Belagavi NewsBelgaum NewsKannada NewsKarnataka News
*ಬೆಳಗಾವಿಯಲ್ಲಿ ಯುವಕನ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ತಾಲುಕಿನ ಹಲಸಿ ಬೇಕವಾಡ ರಸ್ತೆಯ ನರಸೇವಾಡಿ ಬ್ರಿಜ್ ಬಳಿ ರಾತ್ರಿ ಯುವಕನ ಮೇಲೆ ಗುಂಡಿನ ದಾಳಿ ನಡೆದಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಗುಂಡಿನ ದಾಳಿಯಲ್ಲಿ ಅಲ್ತಾಫ್ ಗೌಸ್ ಮಕಾನದಾರ (27) ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಉತ್ತರ ವಲಯ ಐಜಿಪಿ ವಿಕಾಸ ಕುಮಾರ್, ಹೆಚ್ಚುವರಿ ಎಸ್ಪಿ ಶ್ರುತಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗುಂಡಿನ ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ, ನಂದಗಡ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




