Latest

ಕೊರೊನಾ ಸೋಂಕು; ಕಾಂಗ್ರೆಸ್ ಶಾಸಕನ ಆರೋಗ್ಯ ಗಂಭೀರ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ರಾಜ್ಯ ರಾಜಕಾರಣಿಗಳನ್ನು ಬೆಂಬಿಡದೇ ಕಾಡುತ್ತಿದ್ದು, ಕೊರೊನಾ ಸೋಂಕಿನಿಂದ ಬಳಲುತ್ತಿರುವ ಬಸವಕಲ್ಯಾಣ ಕ್ಷೇತ್ರ ಕಾಂಗ್ರೆಸ್ ಶಾಸಕ ನಾರಾಯಣ ರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಕೊವಿಡ್ ಪಾಸಿಟೀವ್ ಹಿನ್ನಲೆಯಲ್ಲಿ ಶಾಸಕ ನಾರಾಯಣರಾವ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿನಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೀಗ ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Home add -Advt

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತರಾಗಿರುವ ನಾರಾಯಣರಾವ್, ಅನಾರೋಗ್ಯದ ಹಿನ್ನೆಲೆಯಲ್ಲಿ ಆರಂಭದಲ್ಲಿ ಬಸವಕಲ್ಯಾಣದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Back to top button