Kannada NewsKarnataka NewsLatest

*ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗುವ ಸಾಧ್ಯತೆ ಇದೆ. ಈ ಹಿನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ದಾವಣಗೆರೆ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯನಗರ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ.


Related Articles

Back to top button