Latest

*ಕರ್ತವ್ಯನಿರತ CPI ಮೇಲೆ ಹಲ್ಲೆ; ಮಾಜಿ ಕಾರ್ಪೊರೇಟರ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕರ್ತವ್ಯನಿರತ ಸಿಪಿಐ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಓರ್ವರನ್ನು ಬೆಂಗಳೂರು ಕಗ್ಗಲಿಪುರ ಪೊಲೀಸರು ಬಂಧಿಸಿದ್ದಾರೆ.

ವಿ.ಬಾಲಕೃಷ್ಣ ಬಂಧಿತ ಮಾಜಿ ಕಾರ್ಪೊರೇಟರ್. ಯಲಚೇನಹಳ್ಳಿ ವಾರ್ಡ್ ನಂ 185ರ ಮಾಜಿ ಕಾರ್ಪೊರೇಟರ್ ಆಗಿದ್ದ ಬಾಲಕೃಷ್ಣ ಕರ್ತವ್ಯ ನಿರತ ಸಿಪಿಐ ವಿಜಯ್ ಕುಮಾರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ನಿನ್ನೆ ರಾತ್ರಿ ಮಾಜಿ ಕಾರ್ಪೊರೇಟರ್ ಹಾಗೂ ಸಿಪಿಐ ವಿಜಯ್ ಕುಮಾರ್ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಬಾಲಕೃಷ್ಣ ಸಿಪಿಐ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

Home add -Advt

ಈ ಬಗ್ಗೆ ಸಿಪಿಐ ಕಗ್ಗಲಿಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದೀಗ ಕಗ್ಗಲಿಪುರ ಪೊಲೀಸರು ವಿ.ಬಾಲಕೃಷ್ಣ ಅವರನ್ನು ಬಂಧಿಸಿದ್ದಾರೆ. ಐಪಿಸಿ ಸೆಕ್ಷನ್ 353 – ಕರ್ತವ್ಯ ನಿರತ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಐಪಿಸಿ ಸೆಕ್ಷನ್ 332 – ಸರ್ಕಾರಿ ಅಧಿಕಾರಿಗೆ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಪ್ರಕರಣ ದಖಲಾಗಿದೆ.

ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಸೇರುವವರ್ಯಾರು?

Related Articles

Back to top button