Karnataka NewsLatest

*ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ*

ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು , ಉತ್ತರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.

Home add -Advt

ಆಗಸ್ಟ್ 19 ಮಂಗಳವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಾಳೆ ಭಾರಿ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಹಾಸನ, ಕೊಡಗು, ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಯಾದಗಿರಿ, ಬಳ್ಳಾರಿ, ದಾವಣಗೆರೆ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಜೋರಾಗಲಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಯ ಹಲವು ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೊಷಿಸಲಾಗಿದೆ.

ಇನ್ನು ಆಗಸ್ಟ್ 24ರವರೆಗೂ ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


Related Articles

Back to top button