Latest

ರಾಜ್ಯದಲ್ಲಿ ಇಂದು 161 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು 161 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಇಂದು ಇಬ್ಬರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5929ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ ಇಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಬೆಂಗಳೂರಿನಲ್ಲಿ ಓರ್ವ ಹಾಗೂ ಕಲಬುರಗಿಯಲ್ಲಿ ಓರ್ವರು ಕೊರೊನಾಗೆ ಸಾವನ್ನಪ್ಪಿದ್ದಾರೆ.

Home add -Advt

ಇನ್ನು ಯಾದಗಿರಿ 61, ಬೆಂಗಳೂರು ನಗರ 29, ಕಲಬುರಗಿ 10, ಕೊಪ್ಪಳ 6, ದಕ್ಷಿಣ ಕನ್ನಡ 23, ಬೀದರ್ 9, ದಾವಣಗೆರೆ 8, ಕೊಪ್ಪಳ 6, ಶಿವಮೊಗ್ಗ 4, ವಿಜಯಪುರ 2, ಚಿಕ್ಕಬಳ್ಳಾಪುರ 2, ಮೈಸೂರು 2, ಬಾಗಲಕೋಟೆ 1 ಧಾರವಾಡ 1, ತುಮಕೂರು 1, ಚಾಮರಾಜನಗರ 1 ಕೇಸ್ ಪತ್ತೆಯಗೈದೆ.

ದಕ್ಷಿಣ ಭಾರತದಲ್ಲೇ ಮೊದಲ ಕೊರೊನಾ ಮುಕ್ತನಗರ ಎಂಬ ಪ್ರಶಂಸೆಗೆ ಪಾತ್ರವಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಮತ್ತೆ ಒಂದು ಕೇಸ್ ಪತ್ತೆಯಾಗುವ ಮೂಲಕ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಕೊರೊನಾ ಸೋಂಕು ವ್ಯಾಪಿಸಿದಂಆಗಿದೆ.

ಇಂದು ಕೊರೊನಾ ಸೋಂಕು ಹೊಸದಾಗಿ ಪತ್ತೆಯಾದ 161 ಜನರಲ್ಲಿ 91 ಜನ ಅಂತರಾಜ್ಯ ಹಾಗೂ 21 ಜನ ಅಂತರಾಷ್ಟ್ರೀಯ ಪ್ರಯಾಣಿಕರಾಗಿದ್ದಾರೆ.

Related Articles

Back to top button