CrimeKannada NewsKarnataka NewsLatest

*ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ.

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ನೆತ್ತರು ಹರಿದಿದೆ. ಮಂಗಳೂರು ಹೊರವಲಯದ ತೊಕ್ಕೊಟ್ಟು ಫೈಓವರ್ ಮೇಲೆ ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಶೀಟರ್

Home add -Advt

ಇಂದು (ಮಾ.27) ಬೆಳ್ಳಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. 

ಬಳಿಕ ರೌಡಿಶೀಟರ್ ರಸ್ತೆಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ನಂತರ ಕಾರಿನಲ್ಲಿ ಪರಾರಿಯಾಗಿದ್ದಾರೆ. ಘಟನೆಗೆ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತನಿಖೆ ಕೈಗೊಂಡಿದ್ದಾರೆ. 

Related Articles

Back to top button