Belagavi NewsBelgaum NewsKarnataka NewsPolitics

*ರಾಜ್ಯಪಾಲರನ್ನು ವಜಾಗೊಳಿಸುವಂತೆ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ ಆಗ್ರಹ*

ರಾಜ್ಯಪಾಲರ ನಡೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ನಾಯಕರ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಇಂದು ಬೆಳಗಾವಿಯಲ್ಲಿ‌ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Home add -Advt

ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಪ್ರತಿಭಟನೆಯ ಮೆರವಣಿಗೆಯಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಪಾಲ್ಗೊಂಡು, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಖೆಗೆ ಆದೇಶಿಸಿರುವ ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿದರು.

ಈ ವೇಳೆ ಮಾತನಾಡಿದ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ, ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರಾಗಿರುವ ಗೆಹ್ಲೋಟ್ ಅವರ ಕ್ರಮ ಸಂವಿಧಾನಬಾಹಿರವಾಗಿದೆ. ರಾಜ್ಯಪಾಲರ ಈ ನಡೆಯನ್ನು ನಾವು ಖಂಡಿಸುತ್ತೇವೆ. ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ವ್ಯಕ್ತವಾಗಿದೆ. ರಾಷ್ಟ್ರಪತಿಗಳು ಕೂದಲೇ ಮಧ್ಯಪ್ರವೇಶ ಮಾಡಿ, ರಾಜ್ಯಪಾಲರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ರಾಜ್ಯಪಾಲರನ್ನು ವಜಾ ಮಾಡುವಂತೆ ಜಿಲಾಧಿಕಾರಿಗಳ ಮೂಲಕ ನಾವು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದೇವೆ ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಶಾಸಕರು, ಬ್ಲಾಕ್ ಅಧ್ಯಕ್ಷರು, ಯುವ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button