Belagavi NewsBelgaum NewsKannada NewsKarnataka News

*ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೊ ಅನಾವರಣ ಹಾಗೂ ದಾನಿಗಳಿಗೆ ಗೌರವ ಸಮರ್ಪಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ: 11-09-2024 ರಂದು ಮುಂಜಾನೆ 10 ಗಂಟೆಗೆ ಸುವರ್ಣ ವಿಧಾನ ಸೌಧದಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಲೋಗೋ ಅನಾವರಣ ಹಾಗೂ ದಾನಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ಜರುಗಲಿದೆ.

ಲೋಕೊಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಘನ ಉಪಸ್ಥಿತಿವಹಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಲಕ್ಷ್ಮಿ ಹೆಬ್ಬಾಳಕರ ಅವರು ವಹಿಸುವರು. ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

Home add -Advt

ಕಾರ್ಯಕ್ರಮ ವಿಶೇಷ ಆಮಂತ್ರಿತರಾಗಿ ಸರ್ಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ನವದೆಹಲಿ ನಿಧಿ-2 ವಿಶೇಷ ಪ್ರತಿಗಳಾದ ಪ್ರಕಾಶ ಹುಕ್ಕೇರಿ, ವಾಯವ್ಯ ಸಾರಿಗೆ ನಿಗಮ ನಿಯಮಿತ ಅಧ್ಯಕ್ಷರಾದ ಭರಮಗೌಡ ಕಾಗೆ, ಹಣಕಾಸು ಸಂಸ್ಥೆ ಅಧ್ಯಕ್ಷರಾದ ಮಹಾಂತೇಶ ಕೌಜಲಗಿ, ಅತಿಥಿಗಳಾಗಿ ರಾಜ್ಯ ಸಭೆ ಸಂಸದರಾದ ಈರಣ್ಣ ಕಡಾಡಿ, ಚಿಕ್ಕೋಡಿ ಲೋಕ ಸಭೆ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ಬೆಳಗಾವಿ ಲೋಕ ಸಭೆ ಸಂಸದರಾದ ಜಗದೀಶ ಶೆಟ್ಟರ, ಲೋಕ ಸಭೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರುಗಳು ಸೇರಿದಂತೆ ಜಿಲ್ಲೆಯ ವಿಧಾನ ಸಭೆ, ವಿಧಾನ ಪರಿಷತ್, ಸದಸ್ಯರುಗಳು ಆಗಮಿಸುವರು.

Related Articles

Back to top button