Kannada NewsKarnataka NewsLatest

*ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ; ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಹಾರ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದೆ. ಇದೀಗ ವಿಕಾಸಸೌಧದ ಕ್ಯಾಂಟಿನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಜಿರಳೆ, ಫಂಗಸ್ ಪತ್ತೆಯಾಗಿದೆ.

ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಇಂದು ದಾಳಿ ನಡೆಸಿದ್ದು, ಈ ವೇಳೆ ತಟ್ಟೆಗಳನ್ನು ಶೇಖರಿಸಿಡುವ ಜಾಗದಲ್ಲಿ ಜಿರಳೆಗಳು ಮತ್ತು ಗ್ರಾಹಕರಿಗೆ ಆಹಾರ ನೀಡುವ ಅಡಕೆ ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆಯಾದೆ.

ಅಲ್ಲದೇ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪ, ಸ್ವಚ್ಛತೆಯ ಕೊರತೆ, ಅವಧಿ ಮೀರಿದ ಪದಾರ್ಥಗಳ ಬಳಕೆ ಹಾಗೂ ನಿಯಮಿತವಾಗಿ ಪೆಸ್ಟ್ ಕಂಟ್ರೋಲ್ ಮಾಡದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳು ಕಂಡುಬಂದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಕ್ಯಾಂಟೀನ್‌ಗೆ ಬೀಗ ಜಡಿದಿದ್ದಾರೆ. ‘ತಾತ್ಕಾಲಿಕವಾಗಿ ಕ್ಯಾಂಟೀನ್ ಬಂದ್’ ಮಾಡಲಾಗಿದೆ ಎಂದು ನಾಮಫಲಕ ಅಳವಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button