Latest

BJP ಜನೋತ್ಸವ ಭಾನುವಾರಕ್ಕೆ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ಮತ್ತೆ ಮುಂದೂಡಿಕೆಯಾಗಿದೆ.

ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಆದರೆ ಆಹಾರ ಸಚಿವರ ಅಕಾಲಿಕ ನಿಧನ ಹಿನ್ನೆಲೆಯಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮ ನಾಳೆಗೆ ಬದಲಾಗಿ ಸೆ.11ರಂದು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಕೆ ಹಾಗೂ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕ್ರಮಗಳ ರೂಪುರೇಷೆ, ಶಕ್ತಿ ಪ್ರದರ್ಶನ ನಿಟ್ಟಿನಲ್ಲಿ ಜನೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಚಿವರ ನಿಧನ ಹಿನ್ನೆಲೆಯಲ್ಲಿ ಸರ್ಕಾರ ಒಂದು ದಿನ ಶೋಕಾಚರಣೆ ಘೋಷಿಸಿದ್ದು, ಶೋಕಾಚರಣೆ ವೇಳೆ ಸಮಾವೇಶ, ಸರ್ಕಾರಿ ಕಾರ್ಯಕ್ರಮ ನಡೆಸುವಂತಿಲ್ಲ. ಈ ನಿಟ್ಟಿನಲ್ಲಿ ಬಿಜೆಪಿ ಜನೋತ್ಸವ ಸಮಾವೇಶ ಮುಂದೂಡಲಾಗಿದೆ.

ಈ ಹಿಂದೆ ನಿಗದಿಯಾಗಿದ್ದ ಬಿಜೆಪಿ ಜನೋತ್ಸವ ಕಾರ್ಯಕ್ರಮ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿತ್ತು. ಬಳಿಕ ನ್ಸೆ.8ಕ್ಕೆ ನಿಗದಿ ಮಾಡಲಾಗಿತ್ತು. ಇದೀಗ ಸಚಿವ ಉಮೇಶ್ ಕತ್ತಿ ನಿಧನ ಹಿನ್ನೆಲೆಯಲ್ಲಿ ಭಾನುವಾರಕ್ಕೆ ಜನೋತ್ಸವ ಕಾರ್ಯಕ್ರಮ ಮುಂದೂಡಲಾಗಿದೆ.

Home add -Advt

ಮತ್ತೆರಡು ವಿಶೇಷ ವಿಮಾನ ಬೆಳಗಾವಿಯತ್ತ

https://pragati.taskdun.com/latest/cm-basavaraj-bommaisiddaramaiahspecial-flightbelagaviumesh-katti-death/

Related Articles

Back to top button