*ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಏಪ್ರಿಲ್ 8ರ ವೇಳೆಗೆ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗಲಿದೆ.

Home add -Advt

ದಕ್ಷಿಣ ಒಳನಾಡಿನ ಭಾಗದಲ್ಲಿ ಬಹುತೇಕ ಹಗುರ ಇಲ್ಲವೇ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 8ರಿಂದ ಮಳೆ ಸುರಿಸುವ ಮಾರುತಗಳು ಚುರುಕುಗೊಳ್ಳಲಿವೆ. ಹಾಗಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಒಳನಾಡಿನ ಕಲಬುರ್ಗಿ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ ಹಾಗು ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

https://pragati.taskdun.com/vidhanasabha-electionsatish-jarakiholicongress-3rd-listbelagavi/
https://pragati.taskdun.com/bjp-mlawomanphoto-viralputturu/

Related Articles

Back to top button