Kannada NewsKarnataka NewsNationalPolitics

*ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪದ ಮೇರೆಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಹೈ ಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮೋಹನ್ ಅವರು ನೀಡಿದ ದೂರನ್ನು ಆಧರಿಸಿ ಪೊಲೀಸರು ಎಫ್‌ಐಆ‌ರ್ ದಾಖಲಿಸಿಕೊಂಡಿದ್ದಾರೆ.

ರಾಹುಲ್ ಗಾಂಧಿ ಹಾಗೂ ಧರ್ಮಗಳ ಬಗ್ಗೆ ಅವಹೇಳನ ಮಾಡಿದ್ದಾರೆ. ಈ ಹೇಳಿಕೆ ಹಲವು ಮಾಧ್ಯಮಗಳಲ್ಲಿ ಈಗಾಗಲೇ ಪ್ರಸಾರವಾಗಿದೆ. ಕೋಮುಗಲಭೆ ಸೃಷ್ಟಿಸುವಂತೆ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾನೂನು ಸುವ್ಯವಸ್ಥೆಗೆ ವಿರುದ್ಧವಾದ ಹೇಳಿಕೆ ಇದಾಗಿದೆ. ಇವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ತೀವ್ರ ನೋವು ತಂದಿದೆ. ಈ ರೀತಿ ಹೇಳಿಕೆ ನೀಡಿರುವ ಇವರ ವಿರುದ್ಧ ತುರ್ತಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಎಸ್‌. ಮನೋಹ‌ರ್ ನೇತೃತ್ವದ ನಿಯೋಗ ಮನವಿ ಮಾಡಿದೆ.

Home add -Advt

Related Articles

Back to top button