Kannada NewsKarnataka NewsLatestPolitics

*ಮತ್ತೆ ಚುರುಕುಗೊಂಡ ಡಿನ್ನರ್ ಪಾಲಿಟಿಕ್ಸ್: ಡಿಸಿಎಂ ಬೆನ್ನಲ್ಲೇ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ*

ಪ್ರಗತಿವಾಹಿನಿ ಸುದ್ದಿ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಳಿಕ ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ.

ಮಾರ್ಚ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನಿವಾಸ ‘ಕಾವೇರಿ’ಯಲ್ಲಿ ಸಚಿವರಿಗೆ ಡಿನ್ನರ್ ಪಾರ್ಟಿ ಆಯೋಜಿಸಿದ್ದು, ರಾಅಜ್ಯ ಕಾಂಗ್ರೆಸ್ ನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Home add -Advt

ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು. ಈ ಬೆಳವಣಿಗೆಗಳ ನಡುವೆಯೇ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ಔತಣಕೂಟ ಆಯೋಜಿಸಿದ್ದು, ಕಾಂಗ್ರೆಸ್ ನಲ್ಲಿ ಡಿನ್ನರ್ ಪಾಲಿಟಿಕ್ಸ್ ಜೋರಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಡಿನ್ನರ್ ಸಭೆಯಲ್ಲಿ ಮುಂದಿನ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ, ಜಿಬಿಎ ಚುನಾವಣೆಗಳ ತಯಾರಿ, ಒಳಮೀಸಲಾತಿ ವಿಚಾರ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆಯಾಗಬಹುದು ಎಂಬ ನಿರೀಕ್ಷೆ ಇದೆ. ಒಟ್ಟಾರೆ ಸಿಎಂ ಸಚಿವರಿಗೆ ಆಯೋಜಿಸಿರುವ ಈ ಔತಣಕೂಟ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.


Related Articles

Back to top button