Belagavi NewsBelgaum NewsKannada NewsKarnataka News

*ಬೆಳಗಾವಿಯಲ್ಲಿ ಯೋಧನ ತಂದೆಯ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವನನ್ನು ಕಬ್ಬಿನ ಗದ್ದೆಯಲ್ಲಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳದಲ್ಲಿ ನಡೆದಿದೆ.

ಶೇಡಬಾಳ ಗ್ರಾಮದ ರಾವಸಾಹೇಬ್ ಪಾಟೀಲ್ ಅವರ ಕಬ್ಬಿನ ಗದ್ದೆಯಲ್ಲಿ ಕೊಲೆಯಾದ ವ್ಯಕ್ತಿಯನ್ನು ಅದೆ ಗ್ರಾಮದ ಶಶಿಕಾಂತ್ ಕೃಷ್ಣಾ ಹೊನಕಾಂಬಳೆ (55) ಎಂದು ಗುರುತಿಸಲಾಗಿದೆ. 

ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಶಶಿಕಾಂತನನ್ನು ಕೊಲೆ ಮಾಡಲಾಗಿದೆ ಎಂಬ ಸಂಶಯವನ್ನು ಶಶಿಕಾಂತ ಪುತ್ರ ರಾಹುಲ್‌ ವ್ಯಕ್ತಪಡಿಸಿದ್ದಾರೆ. ಮೃತ ಶಶಿಕಾಂತ ಇಬ್ಬರು ಪುತ್ರರನ್ನು ಅಗಲಿದ್ದು, ಓರ್ವ ಸೇನೆಯಲ್ಲಿ ಯೋಧನಾಗಿದ್ದಾನೆ. 

ತಂದೆಯ ಶವದ ಬಳಿ ಮಕ್ಕಳ ರೋಧನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಕಾಗವಾಡ ಮತ್ತು ಅಥಣಿ ಪೊಲೀಸರು ಭೇಟಿ ನೀಡಿ ಶ್ವಾನ ದಳದೊಂದಿಗೆ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button