Belagavi NewsBelgaum NewsKannada NewsKarnataka NewsNationalPolitics

*ತಹಶೀಲ್ದಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ: ಕಡತಗಳ ಪರಿಶೀಲನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕು ದಂಡಾಧಿಕಾರಿಗಳು ಮತ್ತು ತಹಶೀಲ್ದಾರ್ ಕಾರ್ಯಾಲಯಕ್ಕೆ ಲೋಕಾಯುಕ್ತರು ಇಂದು ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿ ಲೋಕಾಯುಕ್ತ ಪೊಲೀಸ್ ಠಾಣೆಯ ಡಿಎಸ್‌ಪಿ ಬಿ. ಎಸ್. ಪಾಟೀಲ್ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಯಿಂದ ಸಂಜೆ 5 ರ ವರೆಗೆ ಕಚೇರಿಯ ಎಲ್ಲ ಕಡತಗಳನ್ನು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಇನ್ಸ್ ಪೆಕ್ಟರ್ ಗಳಾದ ನಿರಂಜನ್ ಪಾಟೀಲ್, ರವಿಕುಮಾರ್ ಧರ್ಮಟ್ಟಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ, ತಹಶೀಲ್ದಾರ್ ರಾಜೇಶ್ ಬುರ್ಲಿ ಮತ್ತು ತಹಶೀಲ್ದಾರ್ ಕಚೇರಿಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button