Karnataka News

*ಪೊಲೀಸರ ದಿಢೀರ್ ದಾಳಿ: KSCA ಕಾರ್ಯದರ್ಶಿ, DNA ಮುಖ್ಯಸ್ಥ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತದಲ್ಲಿ 11 ಜನ ಆರ್ ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಆರ್ ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಹಾಗೂ ಇವೆಂಟ್ ಆಯೋಜಿಸಿದ್ದ ಡಿಎನ್ ಎ ಕಂಪನಿ ವಿರುದ್ಧ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

ಕೆ ಎಸ್ ಸಿಎ ಕಾರ್ಯದರ್ಶಿ ಶಂಕರ್, ಖಜಾಂಚಿ ಜಯರಾಮ್, ಡಿಎನ್ ಎ ಮುಖ್ಯಸ್ಥ ವೆಂಕಟ್ ವರ್ಧನ್, ಆರ್ ಸಿಬಿ ಮುಖ್ಯಸ್ಥ ರಾಜೇಶ್ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಪೊಲೀಸರು ದಾಳಿ ನಡೆಸುತ್ತಿದ್ದಂತೆ ಎಲ್ಲರೂ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button