Kannada NewsLatestNational

*ಮನೆ ಮೇಲೆ ಸಿಡಿಲು ಬಡಿದು ಪತಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸಾವು*

ಪ್ರಗತಿವಾಹಿನಿ ಸುದ್ದಿ: ಮನೆಯಮೇಲೆ ಸಿಡಿಲು ಬಡಿದು ಪತಿ-ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘೋರ ಘಟನೆ ನಡೆದಿದೆ.

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ಸೋನ್ವರ್ಷಾ ಹಲ್ಲಾಬೋರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆ ಮೇಲೆ ಸಿಡಿಲು ಬಡಿದು, ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ವೀರೇಂದ್ರ ವನವಾಸಿ, ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಮೃತಪಟ್ಟಿದ್ದಾರೆ. ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button