Karnataka NewsLatest

*ಮುಡಾ ಮಾಜಿ ಆಯುಕ್ತರ ವಿರುದ್ಧ ಲೋಕಾಯುಕ್ತಕ್ಕೆ ದೂರು*

ಪ್ರಗತಿವಾಹಿನಿ ಸುದ್ದಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಆಯುಕ್ತರ ಇಬ್ಬರ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ, ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮದಲ್ಲಿ ಮಾಜಿ ಇಬ್ಬರು ಆಯುಕ್ತರ ಕೈವಾಡವಿದೆ ಎಂದು ಆರೋಪಿಸಿದ್ದಾರೆ. ಈ ನಿಟ್ಟಿನಲ್ಲಿ ಮಾಜಿ ಮೂಡಾ ಆಯುಕ್ತ ನಟೇಶ್ ಹಾಗೂ ದಿನೇಶ್ ಕುಮಾರ್ ಜಿ.ಟಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಇಬ್ಬರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಬಂಧಿಸಬೇಕು ಅಲ್ಲದೇ ಭೂಸ್ವಾಧೀನ ಅಧಿಕಾರಿಗಳು, ಸರ್ಕಾರದ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Related Articles

Back to top button