Kannada NewsKarnataka NewsLatest

*ಇಡಿ ಅಧಿಕಾರಿಗಳ ಹೆಸರಲ್ಲಿ ಚಿನ್ನಾಭರಣ ಅಂಗಡಿ ಮೇಲೆ ದಾಳಿ: 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮಹಾ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ 7.11 ಕೋಟಿ ಹಣ ದರೋಡೆ ಪ್ರಕರಣದ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ 3 ಕೋಟಿಗೂ ಅಧಿಕ ಚಿನ್ನಾಭರಣ ದರೋಡೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

Home add -Advt

ಹುಬ್ಬಳ್ಳಿಯ ಚೆನ್ನಮ್ಮ ವೃತ್ತದ ಬಳಿ ಇರುವ ನೀಲಿಜನ್ ರಸ್ತೆಯಲ್ಲಿರುವ ಚಿನ್ನಾಭರಣ ಅಂಗಡಿಯಲ್ಲಿ ಐವರು ದರೋಡೆಕೋರರು ಇಡಿ ಅಧಿಕಾರಿಗಳು ಎಂದು ಹೇಳಿ ದಾಳಿ ನಡೆಸಿದ್ದಾರೆ. ನಿಮ್ಮ ಅಂಗಡಿ ಮೇಲೆ ಇಡಿ ದಾಳಿ ನಡೆದಿದೆ. ಚಿನ್ನಾಭರಣ, ಹಣದ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಚಿನ್ನಾಭರಣ, ಹಣ ಪಡೆದು ಪರಾರಿಯಾಗಿದ್ದಾರೆ.

ಕೇರಳ ಮೂಲದ ಸುದೀನ್ ಎಂಬುವರಿಗೆ ವಂಚಿಸಿ ಪರಾರಿಯಾಗಿದ್ದಾರೆ. ವಿಚಾರಣೆ ನೆಪದಲ್ಲಿ 2 ಕೆಜಿ 942 ಗ್ರಾಂ ಚಿನ್ನಾಭರಣ, 2 ಲಕ್ಷ ನಗದು ದೋಚಿ ವಂಚಕರು ಎಸ್ಕೇಪ್ ಆಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.


Related Articles

Back to top button