Belagavi NewsBelgaum NewsKannada NewsKarnataka News
*ಬೆಳಗಾವಿ: 40,000 ಮೌಲ್ಯದ ಹೆರಾಯಿನ್ ಜಪ್ತಿ*

ಇಬ್ಬರು ಅರೆಸ್ಟ್
ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಬಂದ ಮಾಹಿತಿಯಂತೆ ಬೆಳಗಾವಿ ಮಾರ್ಕೆಟ್ ಠಾಣೆ ಎಸಿಪಿ ಎಸ್.ಡಿ ಸತ್ಯನಾಯ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರನ್ನು ಯುನುಸ ದಸ್ತಗಿರಸಾಬ ಸನದಿ, ಮುಶೈಬ ಜರಾರಹ್ಮದ ಪಟೇಲ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳು ತಮ್ಮ ಲಾಭಕ್ಕಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ.
ಬಂಧಿತರಿಂದ 40,000/- ರೂ. ಮೌಲ್ಯದ 48.22 ಗ್ರಾಂ ಹೆರಾಯಿನ್ ಮತ್ತು ಕೃತ್ಯಕ್ಕೆ ಬಳಸಿದ ರೂ.40,000/- ಮೌಲ್ಯದ ಒಂದು ಮೋಟರ್ ಸೈಕಲ್ನ್ನು ಸಹ ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



