Kannada NewsLatestNational

*ನದಿಗೆ ಉರುಳಿಬಿದ್ದ ಬಸ್: ಓರ್ವ ಸಾವು; 11 ಜನರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಉತ್ತರಾಖಂಡದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಪ್ರಯಾಣಿಕರ ಬಸ್ ನದಿಗೆ ಉರುಳಿಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 11 ಜನರು ನಾಪತ್ತೆಯಾಗಿದ್ದಾರೆ.

ಉತ್ತರಾಖಂಡದ ರುದ್ರಪ್ರಯಾಗ್ ನಲ್ಲಿ ಈ ಘಟನೆ ನಡೆದಿದೆ. ಅಲಕಾನಂದಾ ನದಿಗೆ ಬಸ್ ಉರುಳಿ ಬಿದ್ದಿದೆ. ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, 11 ಜನರು ನಾಪತ್ತೆಯಾಗಿದ್ದಾರೆ. ಎನ್ ಡಿ ಆರ್ ಎಫ್ ತಂಡದಿಂದ ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button