Kannada NewsKarnataka NewsLatest

*ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ಇಬ್ಬರು ಯುವಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ವೆಂಕಟಾಪುರದ ಬಳಿ ಈ ದುರಂತ ಸಂಭವಿಸಿದೆ. ಭಟ್ಕಳದ ಆಜಾದ್ ನಗರದ ನಿವಾಸಿಗಳಾದ ಬಿಲಾಲ್ ಹಾಗೂ ಅಯಾನ್ ಮೃತ ದುರ್ದೈವಿಗಳು.

Home add -Advt

ಅಪಘಾತದ ರಭಸಕ್ಕೆ ಬಿಲಾಲ್ ಸ್ಥಳದಲ್ಲೇ ಸಾವನ್ನಪ್ಪಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಅಯಾನ್ ನನ್ನು ಉಡುಪಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ. ಇಬ್ಬರೂ ಶಿರಾಲಿಯಿಂದ ಭಟ್ಕಳಕ್ಕೆ ಬರುತ್ತಿದ್ದಾಗ ಇಂದು ಬೆಳಿಗ್ಗೆ ಈ ಘಟನೆ ನಡೆದಿದೆ.

Related Articles

Back to top button