Film & EntertainmentKannada NewsKarnataka NewsLatest

*ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್; ಪ್ರತಿಭಟನೆಯಲ್ಲಿ ಭಾಗಿಯಾದ ನಟ ಶಿವರಾಜ್ ಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ.

ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ ನೀಡಿದ್ದು, ಬೆಂಗಳೂರಿನ ಶಿವಾನಂದ ಸರ್ಕಲ್ ನ ಗುರುರಾಜ ಕಲ್ಯಾಣ ಮಂಟಪ ಬಳಿ ಚಿತ್ರ ರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಕರು ಪ್ರತಿಭಟನೆ ನಡೆಸಿದ್ದಾರೆ.

Home add -Advt

ಪ್ರತಿಭಟನೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಟರಾದ ದರ್ಶನ್, ಉಪೇಂದ್ರ, ವಿಜಯ್ ರಾಘವೇಂದ್ರ, ಶ್ರೀಮುರುಳಿ, ಶ್ರೀನಿವಾಸ್ ಮೂರ್ತಿ, ಸುಂದರ್ ರಾಜ್, ದುನಿಯಾ ವಿಜಯ್, ಧ್ರುವ ಸರ್ಜಾ, ವಸಿಂಷ್ಠ ಸಿಂಹ, ಅನಿರುದ್ಧ, ನಟಿಯರಾದ ಉಮಾಶ್ರೀ, ಗಿರಿಜಾ ಲೋಕೇಶ್, ಶೃತಿ, ಪೂಜಾ ಗಾಂಧಿ, ಅನುಪ್ರಭಾಕರ್, ಪ್ರಮಿಳಾ ಜೋಶಾಯ್, ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಕನ್ನಡ ಭಾಷೆ, ನೆಲ, ಜಲದ ವಿಚಾರ ಬಂದಾಗ ನಾವೆಲ್ಲರೂ ಒಂದು. ಕಾವೇರಿ ನೀರಿಗಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಇಡೀ ಚಿತ್ರರಂಗದ ಬೆಂಬಲವಿದೆ. ಶೀಘ್ರವಾಗಿ ಕಾವೇರಿ ನದಿ ನೀರಿನ ಸಮಸ್ಯೆಯನ್ನು ಸರ್ಕಾರಗಳು ಬಗೆಹರಿಸಬೇಕು ಎಂದು ಒತ್ತಾಯಿಸಿದರು.


Related Articles

Back to top button