
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS) 5830 ಕ್ಲೆರಿಕಲ್ ಕೇಡರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ದೇಶದ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ನೇಮಕಾತಿ ನಡೆಯಲಿದ್ದು, ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ.
ಕೇಂದ್ರ ವಿತ್ತ ಸಚಿವಾಲಯ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.
ಬ್ಯಾಂಕ್ ಕ್ಲೆರಿಕಲ್ ಕೇಡರ್ ಹುದ್ದೆಗೆ ಯಾವುದೇ ಅಂಗೀಕೃತ ವಿವಿಯಲ್ಲಿ ಪದವಿ ಪಡೆದಿರಬೇಕು. ಕನಿಷ್ಠ 20 ಹಾಗೂ ಗರಿಷ್ಠ 28 ವರ್ಷವಾಗಿರಬೇಕು. ಆನ್‌ಲೈನ್ ರಿಜಿಸ್ಟ್ರೇಷನ್‌ಗೆ ಆರಂಭಿಕ ದಿನಾಂಕ 7-10-2021. ಕೊನೆ ದಿನಾಂಕ: 27-10-2021.
ಕರ್ನಾಟಕದಲ್ಲಿ 12 ಜಿಲ್ಲಾ ಕೇಂದ್ರಗಳಲ್ಲಿ ಐಬಿಪಿಎಸ್ ಪ್ರಿಲಿಮ್ಸ್ ಪರೀಕ್ಷೆ ನಡೆಸುತ್ತದೆ. ಮೂರು ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನಡೆಸುತ್ತದೆ.
ಹೆಚ್ಚಿನ ಮಾಹಿತಿಗಾಗಿ https://www.ibps.in/ ವೆಬ್ ಸೈಟ್ ಗೆ ಭೇಟಿ ನೀಡಿ.
ಇಂದು ಚಿನ್ನಾಭರಣಗಳ ದರ ಎಷ್ಟಿದೆ? ಇಲ್ಲಿದೆ ಮಾಹಿತಿ