
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಡಿಸೆಂಬರ್ 5ರಂದು ಬೆಳಗಾವಿಯಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಯ ಸ್ಥಳ ಅಂತಿಮವಾಗಿದೆ.
ಕಾಲೇಜು ರಸ್ತೆಯ ಗಾಂಧಿ ಭವನದಲ್ಲಿ ಕಾರ್ಯಕಾರಿಣಿ ನಡೆಸಲು ನಿರ್ಧರಿಸಲಾಗಿದೆ. ಧರ್ಮನಾಥ ಭವನ, ಸಂಕಮ್ ಹೊಟೆಲ್, ಕೆಎಲ್ಇ ಜೀರಗೆ ಸಭಾಭವನ ಮೊದಲಾದ ಸ್ಥಳಗಳನ್ನು ಪರಿಶೀಲಿಸಿದ ನಂತರ ಗಾಂಧಿಭವನದಲ್ಲೇ ಕಾರ್ಯಕಾರಿಣಿ ನಡೆಸಲು ನಿರ್ಧರಿಸಲಾಯಿತು ಎಂದು ಕಾರ್ಯಕಾರಿಣಿಯ ಆತಿಥ್ಯವಹಿಸಲಿರುವ ಮಹಾನಗರ ಬಿಜೆಪಿ ಅಧ್ಯಕ್ಷ ಶಶಿಕಾಂತ ಪಾಟೀಲ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಗಾಂಧಿಭವನ ನಗರದ ಮಧ್ಯೆ ಇರುವುದರಿಂದ ಕಾರ್ಯಕಾರಿಣಿ ನಡೆಯುವ ದಿನ ಕಾಲೇಜು ರಸ್ತೆಯಲ್ಲಿ ಸಂಚಾರದಟ್ಟಣೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸೇರಿದಂತೆ ಹಲವಾರು ಸಚಿವರು, ಗಣ್ಯರು ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
2011ರಲ್ಲಿ ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ, 2017ರಲ್ಲಿ ಧರ್ಮನಾಥ ಭವನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ನಡೆದಿತ್ತು.