Belagavi NewsBelgaum NewsKannada NewsKarnataka News

*4 ದಿನ ಭಾರಿ ಮಳೆ: 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆಯಾಗಲಿದ್ದು, 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅ. 30ರವರೆಗೂ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಳಗಾವಿ, ಧಾರವಾಡ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಹಾಗೂ ಚಾಮರಾಜನಗರ, ಹಾಸನ, ಕೊಡಗು, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

Home add -Advt

ಅ. 27 ಹಾಗೂ 28 ರಂದು ಬೆಂಗಳೂರು, ಚಿಕ್ಕಮಗಳೂರು, ಶಿವಮೊಗ್ಗ ಹಾಸನ ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗದಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಲಾಗಿದೆ. ಉತ್ತರ ಒಳನಾಡು ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದ ಮಳೆ ಸುರಿಯಲಿದೆ.

ಮುಂದಿನ ಎರಡು ದಿನ ರಾಜಧಾನಿ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಗರಿಷ್ಠ 21 ಕನಿಷ್ಠ 18 ಡಿಗ್ರಿ ವರೆಗೆ ತಾಪಮಾನ ಇರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಒಟ್ಟಿನಲ್ಲಿ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯಲಿದೆ. ಈಗಾಗಲೇ ವರುಣ ಕಾಟ ಕೊಡುತ್ತಿದ್ದು ಹೆಚ್ಚಾಕಮ್ಮಿ ಇನ್ನೂ ಒಂದು ವಾರ ಮಳೆ ಸುರಿಯಲಿದೆ.

Related Articles

Back to top button