Latest

*ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿತ: ಓರ್ವ ಕಾರ್ಮಿಕ ದುರ್ಮರಣ*

ಮೂವರ ಸ್ಥಿತಿ ಗಂಭೀರ

Home add -Advt

ಪ್ರಗತಿವಾಹಿನಿ ಸುದ್ದಿ: ಹಟ್ಟಿ ಚಿನ್ನದ ಗಣಿಯಲ್ಲಿ ಮಣ್ಣು ಕುಸಿತಗೊಂಡು ಕಾರ್ಮಿಕರೊಬ್ಬರುಇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನಲ್ಲಿ ನಡೆದಿದೆ.

ಲಿಂಗಸಗೂರು ತಾಲೂಕಿನ ಹಟ್ಟಿ ಪಟ್ಟಣದ ಗಣಿಯಲ್ಲಿ ಈ ದುರಂತ ಸಂಭವಿಸಿದ್ದು, ಮಣ್ಣು ಕುಸಿದು ಕಾರ್ಮಿಕ ಸಾವನ್ನಪ್ಪಿದ್ದಾನೆ. ಮೂವರು ಮಣ್ಣಿನಡಿ ಸಿಲುಕಿದ್ದು, ಮೂವರನ್ನು ರಕ್ಷಿಸಲಾಗಿದೆ. ಮೂವರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ದುರಂತದಲ್ಲಿ ಮೃತಪಟ್ಟ ಕಾರ್ಮಿಕನನ್ನು 48 ವರ್ಷದ ಮೌನೇಶ್ ಎಂದು ತಿಳಿದುಬಂದಿದೆ.

Related Articles

Back to top button