Kannada NewsKarnataka NewsLatest

*ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ಬಾಲಕಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

2021ರ ಅಕ್ಟೋಬರ್ 16ರಂದು ರವಿ ಎಂಬ ಆರೋಪಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ತನಿಖಾಧಿಕಾರಿ ಹನುಮಂತಪ್ಪ ಕೋರ್ಟ್ ಗೆ ದೋಷಾರೋಪಪಟ್ಟಿ ಸಲ್ಲಿಸಿದ್ದರು.

Home add -Advt

ಇದೀಗ ತುಮಕೂರು ಅಧಿಕ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾರಾವ್, ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಲ್ಲದೇ ಕಾನೂನು ಸೇವಾ ಪ್ರಾಧಿಕಾರಕ್ಕೆ ಬಾಲಕಿಗೆ 4 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆದೇಶ ನೀಡಿದ್ದಾರೆ.

Related Articles

Back to top button