
ಪ್ರಗತಿವಾಹಿನಿ ಸುದ್ದಿ, ದಾವಣಗೆರೆ: ಕೌಟುಂಬಿಕ ಕಲಹದಲ್ಲಿ ಮಹಿಳೆಯೊಬ್ಬರು ಪತಿಯಿಂದಲೇ ಕೊಲೆಯಾಗಿದ್ದಾರೆ.
ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸುಲೋಚನಾ(45)ಕೊಲೆಯಾದವರು. ಪತಿ ನಾಗರಾಜಪ್ಪ (48) ಕೊಲೆಗೈದ ಆರೋಪಿ.
ನಾಗರಾಜಪ್ಪ ನಿತ್ಯ ಪಾನಮತ್ತನಾಗಿ ಮನೆಗೆ ಬಂದು ಪತ್ನಿ ಜತೆ ಜಗಳ ಮಾಡುತ್ತಿದ್ದ. ಜಗಳ ವಿಕೋಪಕ್ಕೆ ಹೋಗಿ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ.
ಘಟನಾ ಸ್ಥಳಕ್ಕೆ ಸಂತೇಬೆನ್ನೂರು ಪೊಲೀಸರು ಭೇಟಿ ನೀಡಿದ್ದು ತನಿಖೆ ಕೈಗೊಂಡಿದ್ದಾರೆ.
 
					 
				 
					 
					 
					 
					
 
					 
					 
					


