Kannada NewsKarnataka NewsLatest
*ಬಿಟ್ ಕಾಯಿನ್ ಹಗರಣ; 3 ಆರೋಪಿಗಳ ಮನೆ ಮೇಲೆ SIT ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಬಿಟ್ ಕಾಯಿನ್ ಪ್ರಕರಣ ಮತ್ತೆ ಸದ್ದು ಮಾಡುತ್ತಿದ್ದು, ಎಸ್ ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಬಿಟ್ ಕಾಯಿನ್ ಹಗರಣ ಪ್ರಮುಖ ಆರೋಪಿಗಳ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಲಾಗಿದೆ.
ಬಿಟ್ ಕಾಯಿನ್ ಹಗರಣದ ಮೂರು ಪ್ರಮುಖ ಆರೋಪಿಗಳ ಮನೆಗಳ ಮೇಲೆ ಎಸ್ ಐ ಟಿ ಅಧಿಕರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದಿರುವ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
ಬಿಟ್ ಕಾಯಿನ್ ಪ್ರಮುಖ ಆರೋಪಿ ಶ್ರೀಕಿ, ಸುನೀಶ್ ಹೆಗ್ಡೆ, ಪ್ರಸಿದ್ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ. ಸುನೀಶ್ ಹೆಗ್ಡೆಯ ಬೆಂಗಳೂರಿನ ಸಂಜಯ್ ನಗರ ನಿವಾಸದ ಮೇಲೆ ದಾಳಿ ನಡೆದಿದೆ. ಮೂವರು ಆರೋಪಿಗಳಿಗೆ ಸೇರಿದ ನಾಲ್ಕಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಡೆಸಿರುವ ಎಸ್ ಐ ಟಿ ಅಧಿಕರಿಗಳು ಪರಿಶೀಲನೆ ನಡೆಸಿದ್ದಾರೆ.




