Karnataka NewsLatestPolitics

*ರಾಜೀನಾಮೆ ಸುದ್ದಿ ಕೇಳಿ ಆಘಾತ: ಸಿದ್ದರಾಮಯ್ಯ ಮನೆ ಮುಂದೆ ಅಭಿಮಾನಿಗಳು, ಬೆಂಬಲಿಗರ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಹರಡುತ್ತಿದ್ದಂತೆ ಅವರ ಬೆಂಬಲಿಗರು, ಅಭಿಮಾನಿಗಳು, ಅಹಿಂದ ನಾಯಕರು ರಾಜ್ಯದ ಮೂಲೆ ಮೂಲೆಗಳಿಂದ ಬೆಂಗಳೂರಿಗೆ ಆಗಮಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಯಾವುದೇ ಕಾರನಕ್ಕಿ ಸಿದ್ದರಾಮಯ್ಯ ಅವರ ರಾಅಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಬಳಿ ಜಮಾವಣೆಗೊಂಡಿರುವ ಬೆಂಬಲಿಗರು, ಅಭಿಮಾನಿಗಳು ಹೈಕಮಾಂಡ್ ನಿರ್ಧಾರದ ವಿರುದ್ಧ ಪ್ರತಿಭಟಿಸಿದರು. ‘ಯಾವನು ಹೈಕಮಾಂಡ್’ ಎಂದು ಸಿದ್ದರಾಮಯ್ಯ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರೆ ಕಾಂಗ್ರೆಸ್ ಪಕ್ಷ ಸರ್ವನಾಶವಾಗುತ್ತದೆ ಎಂದು ಬೆಂಬಲಿಗರು ಗುಡುಗಿದ್ದಾರೆ. ಹಿಂದೆ ಸಿದ್ದರಾಮಯ್ಯ ಜೆಡಿಎಸ್ ತೊರೆದ ನಂತರ ಆ ಪಕ್ಷಕ್ಕೆ ಹಿನ್ನಡೆಯಾಗಿತ್ತು. ಯಡಿಯೂರಪ್ಪ ಮುಖ್ಯಮಂತ್ರುಯಾಗಿದ್ದಗಲೂ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರು. ಆ ಬಳಿಕ ಬಿಜೆಪಿ ಸ್ಥಿತಿ ಏನಾಗಿದೆ ಎಂಬುದು ಇಡೀ ರಾಜ್ಯದ ಜನತೆ ನೋಡುತ್ತಿದೆ. ಅದೇ ರೀತಿ ಸಿಎಂ ಸಿದ್ದರಾಮಯ್ಯ ಓರ್ವ ಮಾಸ್ ಲೀಡರ್. ಅವರನ್ನು ಅಧಿಕಾರದಿಂದ ಕೆಳಗಿಳಿಸಿ, ರಾಜೀನಾಮೆ ಪಡೆದರೆ ಕಾಂಗ್ರೆಸ್ ಪಕ್ಷಕ್ಕೂ ಅದೇ ಗತಿ ಬರುತ್ತದೆ. ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದು ಮೂರು ರಾಜ್ಯದಲ್ಲಿ ಮಾತ್ರ. ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗಟ್ಟಿಯಾಗಿರುವ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗಿಂತಲೂ ಹೀನಾಯ ಸ್ಥಿತಿ ತಲುಪುತ್ತದೆ ಎಂದು ಎಚ್ಚರಿಸಿದ್ದಾರೆ.

ಯಾವ ಕಾರಣಕ್ಕೂ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಬಾರದು. ಹೈಕಮಾಂಡ್ ತನ್ನ ನಿರ್ಧಾರದಿಂದ ಹಿಂದೆ ಸರಿಯಲಿ. ಸಿದ್ದರಾಮಯ್ಯನವರಿ ಸಿಎಂ ಆಗಿ ಮುಂದುವರೆಯಬೇಕು ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವುದೇ ಸಿದ್ದರಾಮಯ್ಯರಿಂದ, ಒಂದು ವೇಳೆ ಸಿಎಂ ಸ್ಥಾನದಿಂದ ಅವರನ್ನ ಕೆಳಗಿಳಿಸಿದರೆ, 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸಬೇಕಾಗುತ್ತದೆ ಎಂದಿದ್ದಾರೆ. ಸಿಂ ನಿವಾಸದ ಬಳಿ ಹೈಕಮಾಂಡ್ ನಾಯಕರ ವಿರುದ್ಧ ಸಿದ್ದರಾಮಯ್ಯ ಅಭಿಮಾನಿಗಳು, ಬೆಂಬಲಿಗರ ಆಕ್ರೋಶ ಭುಗಿಲೇಳುತ್ತಿದ್ದಂತೆ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button