Latest

ಭಾನುವಾರವೂ ಬಿಡುವಿಲ್ಲದೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಭಾನುವಾರವೂ ಬಿಡುವಿಲ್ಲದೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಭಾನುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಕುರಿತಂತೆ ಸಭೆ ನಡೆಸಿದ್ದಲ್ಲದೆ,  ರಾಜ್ಯದ ಪ್ರವಾಹ  ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ರಾಜ್ಯದ ಪ್ರವಾಹ  ಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಮುಖ್ಯಮಂತ್ರಿ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು.

ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಎನ್ ಡಿಆರ್ ಎಫ್ ಅಧಿಕಾರಿಗಳು ಉಪಸ್ಥಿತರಿದ್ದರು.

Home add -Advt

ಇದನ್ನೂ ಓದಿ – ಡಿಸಿ, ಸಿಇಒಗಳಿಗೆ ಯಡಿಯೂರಪ್ಪ ಇಡೀ ದಿನ ಕ್ಲಾಸ್

ಇದಕ್ಕೂ ಮೊದಲು ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಕುರಿತಂತೆ ಯಡಿಯೂರಪ್ಪ ಸಭೆ ನಡೆಸಿದರು.

ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಸುಧಾಮೂರ್ತಿ, ಭಾರತೀಯ ವಿದ್ಯಾಭವನದ ನಿರ್ದೇಶಕ ಹೆಚ್. ಎನ್. ಸುರೇಶ್,  ಮುಖ್ಯಮಂತ್ರಿಗಳ ಸಲಹೆಗಾರ ಎಂ.ಲಕ್ಷ್ಮೀನಾರಾಯಣ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಕಾರ್ಯದರ್ಶಿ ಶಿವಯೋಗಿ ಕಳಸದ್, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ – ಭೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಎಂಬ ಹೆಸರಿನವನಾದ ನಾನು;

Related Articles

Back to top button