Kannada NewsKarnataka News

ಸ್ವಂತ ವೆಚ್ಚದಲ್ಲಿ ಗುಂಡಿ ಮುಚ್ಚುವಂತೆ ಅಭಯ್ ಮನವಿ

ಸ್ವಂತ ವೆಚ್ಚದಲ್ಲಿ ಗುಂಡಿ ಮುಚ್ಚುವಂತೆ ಅಭಯ್ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ-

Home add -Advt

ಭಾರಿ ಮಳೆಯಿಂದಾಗಿ ಬೆಳಗಾವಿ ನಗರದ ರಸ್ತೆಗಳೆಲ್ಲ ಹಾಳಾಗಿವೆ. ಬಹುತೇಕ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ. ರಸ್ತೆಯಲ್ಲಿ ಗುಂಡಿ ಇದೆಯೋ ಗುಂಡಿಯಲ್ಲಿ ರಸ್ತೆ ಇದೆಯೋ ಗೊತ್ತಾಗುತ್ತಿಲ್ಲ.

ಹಾಳಾದ ರಸ್ತೆಗಳನ್ನೆಲ್ಲ ನವೆಂಬರ್ ನಂತರ ಪುನರ್ ನಿರ್ಮಾಣ ಮಾಡಲಾಗುವುದು ಎಂದು ಬೆಳಗಾವಿ ದಕ್ಷಿಣ ಶಾಸಕ ಅಭಯ ಪಾಟೀಲ ತಿಳಿಸಿದ್ದಾರೆ. ಈಗಲೇ ಮಾಡಿದರೆ ಮತ್ತೆ ಮಳೆ ಬಂದರೆ ಹಾಳಾಗುತ್ತದೆ.

ಅಲ್ಲಿಯವರೆಗೆ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಂತೆ ಅಭಯ ಪಾಟೀಲ ಗುತ್ತಿಗೆದಾರರಲ್ಲಿ ಮನವಿ ಮಾಡಿದ್ದಾರೆ. ಸ್ವಂತ ಖರ್ಚಿನಲ್ಲಿ ರಸ್ತೆ ಗುಂಡಿ ಮುಚ್ಚುವಂತೆ ಅವರು ಕೋರಿದ್ದಾರೆ. ಅನೇಕ ಗುತ್ತಿಗೆದಾರರು ತಮ್ಮ ಮನವಿಗೆ ಸ್ಪಂದಿಸಿದ್ದು, ಈಗಾಗಲೆ ಕೆಲಸ ಆರಂಭಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Related Articles

Back to top button