Film & EntertainmentKarnataka NewsLatest

*ಮತ್ತೊಂದು ಹೊಸ ವಿವಾದ ಸೃಷ್ಟಿಸಿದ ಬಿಗ್ ಬಾಸ್ ಖ್ಯಾತಿಯ ರಜತ್*

ಪ್ರಗತಿವಾಹಿನಿ ಸುದ್ದಿ: ಸದಾ ಕಾಲ ವಿವಾದಗಳಿಂದಲೇ ಸುದ್ದಿಯಾಗುವ ಬಿಗ್ ಬಾಸ್ ರಿಯಾಲಿಟಿ ಶೋ ಖ್ಯಾತಿಯ ರಜತ್ ಮತ್ತೊಂದು ಹೊಸ ವಿವಾದ ಸೃಷ್ಟಿಸಿದ್ದಾರೆ. ಸಾರ್ವಜನಿಕವಾಗಿ ಮಚ್ಚು ಹಿಡಿದು, ಫೋಟೋಶೂಟ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ರಜತ್ ಇದೀಗ ಮತ್ತೊಂದು ಫೋಟೋ ಶೂಟ್ ಮೂಲಕ ವಿವಾದಕ್ಕೆ ಸಿಲುಕಿದ್ದಾರೆ.

ಮೈಸೂರಿನ ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ ಬಳಿ ಸಿಗರೇಟ್ ಸೇದುತ್ತಾ ಫೋಟೋಶೂಟ್ ಮಾಡಿದ್ದಾರೆ. ಪಾರಂಪರಿಕ ಕಟ್ಟಡದ ಬಳಿ ಸಿಗರೇಟ್ ಸೇದಿ ಫೋಟೋಶೂಟ್ ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

ಸಿಗರೇಟ್ ಸೇದುತ್ತಾ ವಿಲನ್ ಲುಕ್ ನಲ್ಲಿ ಕಾರಿನಿಂದ ಇಳಿಯುವ ಫೋಟೋ ಶೂಟ್ ವಿಡಿಯೋ ಇನ್ ಸ್ಟಾ ಗ್ರಾಂ ನಲ್ಲಿ ವೈರಲ್ ಆಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button