Belagavi NewsBelgaum NewsKannada NewsKarnataka NewsNationalPolitics

*ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಒಂದು ವಾರ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

Home add -Advt

ಇನ್ನು ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ವೀಕೆಂಡ್ ನಲ್ಲಿ ಇಲ್ಲಿಗೆ ಬರುವ ಪ್ರವಾಸಿಗರು ಸೇರಿದಂತೆ ಸ್ಥಳೀಯರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.

ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಮಳೆಯಾಗುವ ಸಾದ್ಯತೆ ಇದೆ ಎಂದು ತಿಳಿಸಿದೆ.

ಇನ್ನು ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಸಹ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

Related Articles

Back to top button