Latest

ಸಾಹಿತಿ ಚಂದ್ರಶೇಖರ ಕಂಬಾರ ಪತ್ನಿ ಸತ್ಯಭಾಮ ವಿಧಿವಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಶೇಖರ ಕಂಬಾರ ಅವರ ಪತ್ನಿ ಸತ್ಯಭಾಮ ಕಂಬಾರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಅವರಿಗೆ 76 ವರ್ಷ ವಯಸ್ಸಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮಾ ಅವರನ್ನು ಜನವರಿ 3ರಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಬೆಂಗಳೂರಿನ ಕತ್ರಿಗುಪ್ಪೆಯ ಸಿರಿಸಂಪಿಗೆ ನಿವಾಸದಲ್ಲಿ ಪಾರ್ಥಿವಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button