Karnataka NewsLatestPolitics

*ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಮತ್ತೊಂದು ಹೋರಾಟ: ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ಬಿಜೆಪಿ ಮತ್ತೊಂದು ಹೋರಾಟಕ್ಕೆ ಸಜ್ಜಾಗಿದ್ದು, ರಾಯಚೂರಿನಿಂದ ಬಳ್ಳಾರಿವರೆಗೆ ಬೃಹತ್ ಪಾದಯಾತ್ರೆಗೆ ಮುಹೂರ್ತ ಫಿಕ್ಸ್ ಮಾಡಿದೆ.

ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಸಭೆ ಬಳಿಕ ಮಾತನಾಡಿದ ರಾಅಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಾಲ್ಮೀಕಿ ನಿಗಮದ ಹಗರಣದಲ್ಲಿ ಭಾಗಿಯಾಗಿರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದು ಕಾನೂನು ಬಾಅಹಿರ. ಅವರು ರಾಜೀನಾಮೆ ನೀಡಲೇಬೇಕು. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಸೆಪ್ಟೆಂಬರ್ 1ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಬಿಜೆಪಿ ಪಾದಯಾತ್ರೆಗೆ ಜೆಡಿಎಸ್​ನವರು ಸಹ ಬೆಂಬಲ ನೀಡಲಿದ್ದಾರೆ ಎಂದರು.

ಹತ್ತು ದಿನಗಲಕಾಲ ಬೃಹತ್ ಪಾದಯಾತ್ರೆ ನಡೆಯಲಿದೆ. ರಾಯಚೂರು ಜಿಲ್ಲೆಯ ಗುರುಗುಂಟದಿಂದ ಪಾದಯಾತ್ರೆ ಆರಂಭವಾಗಲಿದ್ದು, 190 ಕಿ.ಮೀ.ನಿಂದ 200 ಕಿ.ಮೀ. ಪಾದಯಾತ್ರೆಗೆ ನಿರ್ಧರಿಸಲಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ ಎಂದರು.

ಸಮಾರೋಪದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿ ಭಾಗಿಯಾಗ್ತಾರೆ. ನಾಗೇಂದ್ರ ರಾಜೀನಾಮೆ, ಮೀಸಲಾತಿ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಉತ್ತರ ಕರ್ನಾಟಕದ ನೀರಾವರಿಗೆ ಆದ್ಯತೆ, ಬರ, ಖಾಲಿ ಹುದ್ದೆ ಭರ್ತಿ ಸೇರಿ ಹಲವು ವಿಚಾರ ತೆಗೆದುಕೊಂಡು ಜನರ ಬಳಿ ಹೋಗಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button