
ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಪಾಂಡವಪುರ ಶಾಸಕ ಸಿ.ಎಸ್.ಪುಟ್ಟರಾಜು ಅವರ ಮನೆ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳನ್ನು ಪುಡಿಗೈದಿದ್ದಾರೆ.
ನಿನ್ನೆ ತಡರಾತ್ರಿ ಶಾಸಕರ ಮನೆ ಮೇಲೆ ದಾಳಿ ನಡೆಸಿರುವ ಕಿಡಿಗೇಡಿಗಳ ಗುಂಪು ಈ ಕೃತ್ಯವೆಸಗಿದ್ದು, ಮನೆಯ ಹೊರಗಡೆ ನಿಂತಿದ್ದ 8 ಕಾರುಗಳ ಗಾಜುಗಳನ್ನು ಪುಡಿ ಪುಡಿ ಮಾಡಿ ಪರಾರಿಯಾಗಿದ್ದಾರೆ. ಸಿಸಿಟಿವಿ ಕ್ಯಾಮರಾದಲ್ಲಿ ಕಿಡಿಗೇಡಿಗಳ ಕೃತ್ಯ ಸೆರೆಯಾಗಿದೆ.
ಶಾಸಕರ ಮನೆ ಮೇಲೆ ಕಲ್ಲುತೂರಾಟ ಪ್ರಕರಣ ಸಂಬಂಧ ಪಾಂಡವಪುರ ಪೊಲೀಸರು ಕಿಡಿಗೇಡಿಗಳನ್ನು ಬಂಧಿಸಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿದುಬಂದಿದೆ.
ಹಬ್ಬದ ಸಂಭ್ರಮದಲ್ಲಿದ್ದ ಆಭರಣ ಪ್ರಿಯರಿಗೆ ಇಲ್ಲಿದೆ ಮಹತ್ವದ ಸುದ್ದಿ; ಚಿನ್ನ, ಬೆಳ್ಳಿ ದರ ಇಂದು ಎಷ್ಟಿದೆ ಗೊತ್ತೆ?