Karnataka NewsLatestPolitics

*ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ಪ್ರಯಾಣಿಸಿದ ಸಿದ್ದರಾಮಯ್ಯ: ಡಿ.ಕೆ.ಶಿವಕುಮಾರ್ ಸೇರಿ ಸಚಿವ, ಶಾಸಕರೂ ದೌಡು*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆ ಪ್ರಕ್ರಿಯೆ ಚುರುಕುಗೊಂಡಿದೆ. ಈ ನಡುವೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ದೆಹಲಿಗೆ ತೆರಳಿದ್ದಾರೆ.

ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ತೆರಳಿದರು.

ಸಿದ್ದರಾಮಯ್ಯ ಬೆನ್ನಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಂಜೆ ದೆಹಲಿಗೆ ದೌಡಾಯಿಸುತ್ತಿದ್ದಾರೆ. ಕೆಲ ಸಚಿವರು , ಶಾಸಕರು ಕೂಡ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಯತ್ತ ಮುಖ ಮಾಡಿದ್ದಾರೆ. ಈ ಮೂಲಕ ದೆಹಲಿ ಮತ್ತೆ ರಾಜ್ಯ ರಾಜಕಾರಣದ ಶಕ್ತಿ ಕೇಂದ್ರವಾಗಿದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಚರ್ಚಿಸಿ ಸಿಎಲ್ ಪಿ ಸಭೆ, ಹೊಸ ಸಿಎಂ ಆಯ್ಕೆ, ಡಿಸಿಎಂ ಸ್ಥಾನಗಳ ಹಂಚಿಕೆ ಮತ್ತು ಸಚಿವ ಸಂಪುಟ ರಚನೆ ಕುರಿತು ಚರ್ಚಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಎಲ್ಲ ಬೆಳವಣಿಗೆಗಳು ನಡೆಯುತ್ತಿದ್ದು, ನೂತನ ಮುಖ್ಯಮಂತ್ರಿಗಳೊಂದಿಗೆ ಎಷ್ಟು ಸಚಿವರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಎಂಬ ಬಗ್ಗೆಯೂ ಮಾತುಕತೆ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button