Latest

KAS ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆ ಎ ಎಸ್ ಅಧಿಕಾರಿ ರಂಗನಾಥ್ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶಾಕ್ ನೀಡಿದ್ದಾರೆ.

ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತ ಪ್ರಧಾನ ವ್ಯವಸ್ಥಾಪಕರಾಗಿರುವ ರಂಗನಾಥ್, ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿಬಂದಿತ್ತು.

40 ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಬೆಂಗಳೂರು ಸೇರಿದಂತೆ ರಂಗನಾಥ್ ಗೆ ಸೇರಿದ 5 ಸ್ಥಳಗಳಲ್ಲಿ ದಾಳಿ ನಡೆಸಿದೆ. ನ್ಯಾಯಾಂಗ ಬಡಾವಣೆ ನಿವಾಸ, ದೊಡ್ಡಬಳ್ಳಾಪುರದ ವಾಸದ ಮನೆ, ದೊಡ್ಡಬಳ್ಳಾಪುರದ ಕನಕ ಟ್ರಸ್ಟ್ ಹಾಗೂ ಅವರ ಅಕ್ಷರ ಪಬ್ಲಿಕ್ ಸ್ಕೂಲ್ ಹಾಗೂ ನಾಗರಬಾವಿಯಲ್ಲಿರುವ ಸಂಬಂಧಿಕರ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಭಾರಿ ಮಳೆ

Home add -Advt

Related Articles

Back to top button