Kannada NewsKarnataka NewsLatest

*ಪತ್ನಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ*

ಪ್ರಗತಿವಾಹಿನಿ ಸುದ್ದಿ: ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ನವವಿವಾಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಗಿರಿನಗರದಲ್ಲಿ ಈ ಘಟನೆ ನಡೆದಿದೆ. ಗಗನ್ ರಾವ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಗಗನ್ ಬ್ಯಾಂಕ್ ಉದ್ಯೋಗಿಯಾಗಿದ್ದ. 6 ತಿಂಗಳ ಹಿಂದಷ್ಟೇ ಮೇಘನಾ ಎಂಬುವವರ ಜೊತೆ ವಿವಾಹವಾಗಿದ್ದ.

ಮದುವೆಯಾದಾಗಿನಿಂದ ಪತ್ನಿ ಮೇಘನಾ ಗಗನ್ ಗೆ ಕಿರುಕುಳ ನೀಡುತ್ತಿದ್ದಳಂತೆ. ವಿಪರೀತ ಅನುಮಾನ ಪಡುತ್ತಿದ್ದಳಂತೆ. ಇದೇ ವಿಚಾರವಾಗಿ ಪತಿ-ಪತ್ನಿ ನಡುವೆ ಆಗಾಗ ಜಗಳವಾಗುತ್ತಿತ್ತು ಎನ್ನಲಾಗಿದೆ. ನಿನ್ನೆಯೂ ಇಬ್ಬರ ನಡುವೆ ಗಲಾಟೆಯಾಗಿದೆ. ಇದರಿಂದ ನೊಂದ ಗಗನ್ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ. ಗಿರಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button