Belagavi NewsBelgaum NewsKannada NewsKarnataka NewsLatest

ಸವದತ್ತಿ ಅಭಿವೃದ್ಧಿಗೆ ಭರ್ಜರಿ ಅನುದಾನ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಸುಕ್ಷೇತ್ರ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ರೂ. 100 ಕೋಟಿ ಅನುದಾನವನ್ನು ಮಂಜೂರು ಮಾಡಿದೆ ಎಂದು ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.

ಈ ಅನುದಾನವನ್ನು ಕೇಂದ್ರ ಪ್ರವಾಸೋದ್ಯಮ ಇಲಾಖೆ “Approval of capital expenditure under part -3 ( Development of lconic tourist centres of global scale ) of the scheme of special assistance to States for capital investment -2024-25 ಈ ಯೋಜನೆ ಅಡಿ ಮಂಜೂರು ಮಾಡಿದ್ದು, ಕರ್ನಾಟಕ ರಾಜ್ಯದಲ್ಲಿ ಆಯ್ಕೆಯಾದ ಎರಡು ದೇವಸ್ಥಾನಗಳಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನವೂ ಒಂದಾಗಿದೆ ಎಂದು ಅವರು ತಿಳಿಸಿದ್ದಾರೆ.

Home add -Advt

ಪ್ರಸ್ತಾಪಿತ ಯೋಜನೆಯ ಅನುಮೋದನೆಯ ಕುರಿತು ಹಿಂದಿನ ತಿಂಗಳಷ್ಟೆ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಇವರನ್ನು ಭೇಟಿ ಮಾಡಿದ ಸಂಸದರು ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನದ ಮಹತ್ವತೆಯ ಕುರಿತು ಹಾಗೂ ಇಲ್ಲಿ ಬರುವ ಭಕ್ತಾದಿಗಳ ಅನುಕೂಲಕ್ಕೆ ಮೂಲಭೂತ ಸೌಕರ್ಯದ ಅವಶ್ಯಕತೆಯ ಬಗ್ಗೆ ತಿಳಿಸಿ, ಯೋಜನೆಯ ಒಪ್ಪಿಗೆಗಾಗಿ ವಿನಂತಿಸಿದ್ದರು.

ಈ ಯೋಜನೆಯ ಅನುದಾನದಿಂದ ಪ್ರಸ್ತಾಪಿತ ದೇವಸ್ಥಾನದಲ್ಲಿ ಎಲ್ಲ ಮೂಲಭೂತ ಸೌಕರ್ಯಗಳು ನಿರ್ಮಾಣವಾಗಲಿದ್ದು ಇದರಿಂದ ಭಕ್ತಾದಿಗಳಿಗೆ ಹೆಚ್ಚಿನ ಅನುಕೂಲತೆ ಆಗಲಿದೆ ಎಂದು ಜಗದೀಶ ಶೆಟ್ಟರ ಅವರು ತಿಳಿಸಿದ್ದಾರೆ.

Related Articles

Back to top button