Latest

ಮತ್ತೋರ್ವ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ

ಪ್ರಗತಿವಾಹಿನಿ ಸುದ್ದಿ; ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಆರ್.ಎಸ್.ನಾಯ್ಡು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಹಲ್ಲೆ ನಡೆಸಿ, ಅತ್ಯಾಚಾರಕ್ಕೆ ಯತ್ನ ನಡೆಸಲಾಗಿದೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

ಈ ಬಗ್ಗೆ ಸ್ವತ: ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ, ಹಲ್ಲೆ ಪ್ರಕರಣ ನಡೆದಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೈಸೂರು ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದು, ಸೂಕ್ತ ಕ್ರಮಕ್ಕೆ ಸೂಚಿಸುತ್ತೇನೆ ಎಂದು ಹೇಳಿದ್ದಾರೆ.
ನೀರಿನ ಹೊಂಡಕ್ಕೆ ಬಿದ್ದ ಪುಟಾಣಿ ಮಕ್ಕಳು; ಸಹೋದರರಿಬ್ಬರ ದುರ್ಮರಣ

Related Articles

Back to top button