Latest

ಸಿ.ಪಿ.ಯೋಗೇಶ್ವರ್ ಗೆ ಎದುರಾಯ್ತು ಸಂಕಷ್ಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಸಿ.ಪಿ.ಯೋಗೇಶ್ವರ್ ಗೆ ಸಂಕಷ್ಟ ಎದುರಾಗಿದೆ. ಯೋಗೇಶ್ವರ್ ಅವರನ್ನು ಸಂಪುಟದಿಂದ ವಜಾಮಾಡುವಂತೆ ಬಿಜೆಪಿ ಶಾಸಕರೇ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಆಗ್ರಹಿಸಿದ್ದಾರೆ.

ನಾಯಕತ್ವ ಬದಲಾವಣೆಗೆ ಯೋಗೇಶ್ವರ್ ಯತ್ನಿಸಿದ್ದಾರೆ ಎಂಬ ವಿಚಾರವಾಗಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಬೆನ್ನಲ್ಲೇ ಸಿ.ಪಿ.ಯೋಗೇಶ್ವರ್ ವಿರುದ್ಧ ಸ್ವಪಕ್ಷಿಯ ಶಾಸಕರೇ ಸಹಿ ಸಂಗ್ರಹಕ್ಕೆ ಮುಂದಾಗಿದ್ದು, ಸಂಪುಟದಿಂದ ಯೋಗೇಶ್ವರ್ ಅವರನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

Home add -Advt

ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ 18 ಶಾಸಕರು ಯೋಗೇಶ್ವರ್ ವಿರುದ್ಧ ಸಹಿ ಸಂಗ್ರಹಿಸಿದ್ದು, ಇಂದು ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಶಾಸಕರು ಯೋಗೇಶ್ವರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಎಂದು ಒತ್ತಾಯಿಸಿದ್ದಾರೆ. ಬೆಳ್ಳಿ ಪ್ರಕಾಶ್, ನಿರಂಜನ್ ಕುಮಾರ್, ರಾಜು ಗೌಡ ಮೊದಲಾದ ಶಾಸಕರು ರೇಣುಕಾಚಾರ್ಯ ನೇತೃತ್ವದಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಹಿ ಸಂಗ್ರಹ ಪತ್ರವನ್ನು ಸಲ್ಲಿಸಿದ್ದಾರೆ.
ಒಂದು ವರ್ಷದ ಮಗು ಕೊರೊನಾಗೆ ಬಲಿ

Related Articles

Back to top button