Karnataka NewsLatestPolitics

*ನಾನು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3000 ರೂ. ಹಾಗೂ ಪುರುಷರಿಗೆ 2000 ರೂ.: ಶಾಸಕ ಯತ್ನಾಳ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಉಪಚುನಾವಣಾ ಅಖಾಡ ರಂಗೇರಿದ್ದು, ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಭಾರಿ ಕಸರತ್ತು ಮಡುತ್ತಿದ್ದಾರೆ. ಈ ನಡುವೆ ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು ಬಲವಾಗಿ ಪ್ರತಿಪಾದಿಸಿದ ಯತ್ನಾಳ್, ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸುವಂತೆ ಕರೆ ನೀಡಿದರು.

Home add -Advt

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ ಯತ್ನಾಳ್, ಇವು ಜನರ ಮೇಲೆ ತೆರಿಗೆ ಹೊರೆಯನ್ನು ಹೆಚ್ಚಿಸಿವೆ ಎಂದು ಆರೋಪಿಸಿದರು. ಮರಣೋತ್ತರ ಪ್ರಮಾಣಪತ್ರದ ಶುಲ್ಕ 25 ರೂಪಾಯಿಯಿಂದ 100 ರೂಪಾಯಿಗೆ ಏರಿಕೆಯಾಗಿರುವುದನ್ನು ಮತ್ತು ಪ್ರತಿ ಯೂನಿಟ್ ವಿದ್ಯುತ್ ದರ 7 ರೂಪಾಯಿ 20 ಪೈಸೆಗೆ ಏರಿರುವುದನ್ನು ಅವರು ಉಲ್ಲೇಖಿಸಿದರು.

ಯುವಕರಿಗೆ ಉದ್ಯೋಗ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಬೇಕು, ಕೇವಲ 2,000 ರೂಪಾಯಿ ನೀಡುವ ಯೋಜನೆಗಳಲ್ಲ ಎಂದರು. ಸುಮಾರು ಮೂರು ಲಕ್ಷ ಸರ್ಕಾರಿ ಹುದ್ದೆಗಳು ಖಾಲಿಯಿದ್ದರೂ ಅವುಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಯತ್ನಾಳ್ ದೂರಿದರು. 2028ರ ವೇಳೆಗೆ ಬದಲಾವಣೆ ತರಲು ವೀರಣ್ಣ ಚರಂತಿಮಠ ಅವರನ್ನು ಬಹುಮತದಿಂದ ಆಯ್ಕೆ ಮಾಡುವಂತೆ ಮತದಾರರಲ್ಲಿ ಮನವಿ ಮಾಡಿದರು.

ಇದೇ ವೇಳೆ ನಾನು ಮುಖ್ಯಮಂತ್ರಿಯಾದರೆ ಮಹಿಳೆಯರಿಗೆ 3000 ರೂಪಾಯಿ ಹಾಗೂ ಪುರುಷರಿಗೆ 2000 ರೂ ಕೊಡುವುದಾಗಿ ಘೋಷಿಸಿದರು.

https://pragativahini.com/tadiyandamol-bettakodagutreckinggirlmissing


Related Articles

Back to top button