Latest

2 ಡೋಸ್ ಲಸಿಕೆ ಪಡೆದವರಲ್ಲೂ ಒಮಿಕ್ರಾನ್; ರಾಜ್ಯದಲ್ಲಿ ಮತ್ತೆ 5 ಕೇಸ್ ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಹೆಚ್ಚುತ್ತಿದ್ದು, ಇದೀಗ ಮತ್ತೆ ಐವರಲ್ಲಿ ಒಮಿಕ್ರಾನ್ ಪತ್ತೆಯಾಗಿದೆ.

ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಅಮೆರಿಕಾದಿಂದ ರಾಜ್ಯಕ್ಕೆ ಆಗಮಿಸಿದ 22 ವರ್ಷದ ಯುವತಿ, 24 ವರ್ಷದ ಯುವಕ, ದುಬೈನಿಂದ ಆಗಮಿಸಿದ್ದ 53 ವರ್ಷದ ವ್ಯಕ್ತಿ, ಘಾನಾದಿಂದ ಬಂದ 61 ವರ್ಷದ ವ್ಯಕ್ತಿ ಹಾಗೂ ಮುಂಬೈ ನಿಂದ ಆಗಮಿಸಿದ್ದ 41 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ದೃಢಪಟ್ಟಿದೆ.

Home add -Advt

ಅಮೆರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದ ದಾವಣಗೆರೆ ಮೂಲದ 22 ವರ್ಷದ ಯುವತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಅಚ್ಚರಿಯೆಂದರೆ ಸೋಂಕಿತ ಯುವತಿ ಎರಡು ಡೋಸ್ ಲಸಿಕೆ ಪಡೆದಿದ್ದರೂ ಒಮಿಕ್ರಾನ್ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ಯುವತಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಸೋಂಕಿತೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ.
ರೂಪಾಂತರಿ ವೈರಸ್ ಜತೆಗೆ ಕೋವಿಡ್ ಸೋಂಕಿತರ ಸಂಖ್ಯೆಯೂ ದಿಢೀರ್ ಏರಿಕೆ

Related Articles

Back to top button