
ಪ್ರಗತಿವಾಹಿನಿ ಸುದ್ದಿ: ರಾಜ್ಯವು ನಕ್ಸಲ್ ಮುಕ್ತವಾಗಿರುವುದರಿಂದ ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ನಮ್ಮ ಸರ್ಕಾರದ ಅವಧಿಯಲ್ಲಿ 6 ಜನ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ದಳ ವಿಸರ್ಜನೆ ಮಾಡುವುದು. ಇನ್ನು ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ 10 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.